HomeCrimeBREAKING: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ: ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ

BREAKING: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ: ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ಭಗೀರಥ ಕೊಲೆಯಾದ ವ್ಯಕ್ತಿ. ದೀಪು ಮಂಡಲ್ ಸ್ನೇಹಿತನನ್ನೇ ಹೊಡೆದು ಕೊಂದ ಆರೋಪಿ. ಇಬ್ಬರೂ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಎಣ್ಣೆ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ದೀಪು, ಸುತ್ತಿಗೆಯಿಂದ ಭಗೀರಥನನ್ನು ಹೊಡೆದು ಕೊಲೆಗೈದಿದ್ದಾನೆ. ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ದೀಪುನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular