HomeKarnatakaಸಾವಿನಲ್ಲೂ ಒಂದಾದ ಸ್ನೇಹಿತರು: ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ

ಸಾವಿನಲ್ಲೂ ಒಂದಾದ ಸ್ನೇಹಿತರು: ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ

ಶಿವಮೊಗ್ಗ: ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಸುದ್ದಿ ತಿಳಿದ ಸ್ನೇಹಿತನೂ ಹೃದಯದಾತದಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಆನಂದ್(30), ಸಾಗರ್(35) ಎಂದು ಗುರುತಿಸಲಾಗಿದೆ. ಆನಂದ್ ಮತ್ತು ನಟರಾಜ್ ಅವರು ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ನಟರಾಜ್ ಪಾರಾಗಿದ್ದಾರೆ. ಆನಂದ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದ ಸಾಗರ್ ಗೆ ಹೃದಯಾಘಾತವಾಗಿದ್ದು, ಅವರೂ ಸಾವನ್ನಪ್ಪಿದ್ದಾರೆ.

ಸ್ನೇಹಿತರಿಬ್ಬರು ಸಾವಿನಲ್ಲೂ ಒಂದಾಗಿದ್ದು, ಗ್ರಾಮಸ್ಥರು ಅಕ್ಕಪಕ್ಕದಲ್ಲಿ ಇಬ್ಬರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇಬ್ಬರ ಸಾವಿಗೆ ಸ್ನೇಹಿತರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular