HomeKarnatakaSHOCKING: ಶಾಲೆಯಿಂದ ಬ್ಯಾಗ್ ತರದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾದ ಸ್ನೇಹಿತರು

SHOCKING: ಶಾಲೆಯಿಂದ ಬ್ಯಾಗ್ ತರದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾದ ಸ್ನೇಹಿತರು

ಬೆಳಗಾವಿ: ಶಾಲೆಯಿಂದ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಗೆ ಸಹಪಾಠಿಗಳು ಚಾಕುವಿನಿಂದ ಇರಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಘಟನೆ ನಡೆದಿದೆ. ಪ್ರದೀಪ್ ಬಂಡಿವಡ್ಡರ್ ಎಂಬ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕರು ಪರಾರಿಯಾಗಿದ್ದಾರೆ. ಸಂಜೆ ಶಾಲೆಯಿಂದ ಬ್ಯಾಗ್ ತರುವಂತೆ ಗೆಳೆಯರು ಹೇಳಿದ್ದರು. ಆದರೆ ಆತ ಬ್ಯಾಗ್ ತರದ ಕಾರಣ ಕೃತ್ಯವೆಸಗಿದ್ದಾರೆ. ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ್ ಶಹರಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular