BREAKING : ರಾಜ್ಯದಲ್ಲಿ ಇನ್ಮುಂದೆ ‘ಯೂಟ್ಯೂಬ್ ಚಾನೆಲ್’ ಆರಂಭಕ್ಕೆ ‘ಲೈಸೆನ್ಸ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ನಿರ್ಧಾರ.!

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ‘ಯೂಟ್ಯೂಬ್ ಚಾನೆಲ್’ ಆರಂಭಕ್ಕೆ ‘ಲೈಸೆನ್ಸ್’ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read