ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಡಿಸೆಂಬರ್ 1ರ ಸೋಮವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಗ್ರಾಮೀಣ ಪ್ರದೇಶದ ಜನರ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದರು.
2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭ ಹಾಗೂ ಇ-ಸ್ವತ್ತು ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ ಸ್ವತ್ತುಗಳಿಗೆ ಹೊಸದಾಗಿ ಇ-ಖಾತೆ ನೀಡುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಇ ಸ್ವತ್ತು ತಂತ್ರಾಂಶದ ಮೂಲಕ ತಮ್ಮ ಆಸ್ತಿಯ ಸ್ಥಿತಿಗತಿಗಳನ್ನು ಪರಿಶೀಲಿಸಬಹುದು ಹಾಗೂ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಇ-ಖಾತೆ ಪಡೆಯಬಹುದಾಗಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ‘ಇ-ಸ್ವತ್ತು’ ವಿತರಣೆ ಕಾರ್ಯಕ್ರಮ ಜಾರಿಯಾಗಿದೆ. ಇದರ ಮುಖ್ಯ ಉದ್ದೇಶಗಳು, ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಖಾತೆಗಳನ್ನು ನೀಡುವ ಮೂಲಕ ಪಾರದರ್ಶಕತೆ ಮತ್ತು ತ್ವರಿತ ವಿಲೇವಾರಿ ಮಾಡುವುದಾಗಿದೆ . ಇ-ಸ್ವತ್ತು 2.0 ತಂತ್ರಾಂಶ ಬಳಸಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಮತ್ತು 15 ದಿನಗಳಲ್ಲಿ ಇ-ಖಾತೆ ನೀಡಲು ಗುರಿ ಹೊಂದಲಾಗಿದೆ
ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸೃಷ್ಟಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ, ಗ್ರಾಮೀಣರ ಜೀವನಮಟ್ಟ ಸುಧಾರಿಸುವಂತೆ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಗುತ್ತಿದೆ.
ಇಂದು 2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭ ಹಾಗೂ ಇ-ಸ್ವತ್ತು ತಂತ್ರಾಂಶಕ್ಕೆ ಚಾಲನೆ@CMofKarnataka @siddaramaiah @DKShivakumar @PriyankKharge pic.twitter.com/yLtniHitpm
— DIPR Karnataka (@KarnatakaVarthe) December 1, 2025
