HomeKarnatakaಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹ ಬರ ಅಧ್ಯಯನ ಪ್ರವಾಸ ನಡೆಸಲಿದ್ದಾರೆ.

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮತ್ತು ನಾಳೆ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬರ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳವಾರ ತುಮಕುರು ಜಿಲ್ಲೆಯ ಗುಬ್ಬಿ ಮತ್ತು ಸಿರಾ ವಿಧಾನಸಭೆ ಕ್ಷೇತ್ರಗಳ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಜೊತೆಗೆ ಮುಖಾಮುಖಿ ಚರ್ಚೆ ನಡೆಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular