HomeLatest Newsಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ ಉಳಿತಾಯಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಹತ್ವದ ಕ್ರಮ: ವಾಹನಗಳ...

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ ಉಳಿತಾಯಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಹತ್ವದ ಕ್ರಮ: ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತಗೊಳಿಸಲು ಸಿಎಂ ಯೋಗಿ ಆದಿತ್ಯನಾಥ್ ಆದೇಶ

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದಿಂದಾಗಿ ತಲೆದೋರಿರುವ ಇಂದನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಧನ ಉಳಿತಾಯಕ್ಕೆ ಹಾಗೂ ಮಿತ ವ್ಯಯದ ಬಗ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ನಾಯಕರು ಇಂಧನ ಬಳಕೆ ತಗ್ಗಿಸಲು ಮಹತ್ವದ ಆದೇಶ ಹೊರಡಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಸಿಎಂ ರೆಖಾ ಗುಪ್ತಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವು ನಾಯಕರು ಈ ನಿಟ್ಟಿನಲ್ಲಿ ತಮ್ಮ ಮಂತ್ರಿ ಮಂಡಳಕ್ಕೆ ಹೊಸ ಆದೇಶ ಹೊರಡಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಹಾಗೂ ಸಚಿವರ ವಾಹನಗಳ ಸಂಖ್ಯೆಯಲ್ಲಿ ಶೇ.50ರಷ್ಟು ಕಡಿತ ಮಾಡುವಂತೆ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರು ಮತ್ತು ಶಾಸಕರು ವಾರಕ್ಕೊಮ್ಮೆ ಕಡ್ಡಾಯವಾಗಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ವರ್ಕ್ ಫ್ರಂ ಹೋಮ್ ವ್ಯವಸ್ಥೆಗೆ ಉತ್ತೇಜನ ಕೊಡಲು, ಮತ್ತು ಹೆಚ್ಚು ಸಿಬ್ಬಂದಿ ಇರುವ ಸಂಸ್ಥೆಗಳಲ್ಲಿ ವಾರಕ್ಕೆ ಎರಡು ದಿನ ವರ್ಕ್ ಫ್ರಂ ಮಾಡಲು ಶಿಫಾರಸು ಮಾಡುವಂತೆ ಸಿಎಂ ಸೂಚಿಸಿದ್ದಾರೆ.

ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅಧಿಕೃತ ಕೆಲಸಗಳಿಗೆ ಕನಿಷ್ಠ ವಾಹನ ಬಳಸುವುದಾಗಿ ತಿಳಿಸಿದ್ದಾರೆ. ತಮ್ಮನ್ನೂ ಒಳಗೊಂಡಂತೆ ದೆಹಲಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಅಧಿಕಾರಿಗಳು ಕಾರ್-ಪೂಲಿಂಗ್ (ವಾಹನ ಹಂಚಿಕೆ) ಮತ್ತು ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪ್ರಧಾನಿಗಳ ಸಲಹೆ ಪಾಲಿಸುವಂತೆ ಸಾರ್ವಜನಿಕರಿಗೂ ಮನವಿ ಮಾಡಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಮ್ಮ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವುದಾಗಿ ಘೋಷಿಸಿದ್ದು, ಇತರ ಸಚಿವರಿಗೂ ಇದೇ ರೀತಿ ಅನುಸರಿಸುವಂತೆ ಸೂಚಿಸಿದ್ದಾರೆ. ಸಾಮಾನ್ಯ ಜನರು ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರಿ ವಿಮಾನ ಮತ್ತು ಹೆಲಿಕಾಪ್ಟರ್ ಬಳಕೆಗೆ ಬ್ರೇಕ್ ಹಾಕಲಾಗಿದೆ. ಸಚಿವರು ತುರ್ತು ಕೆಲಸಗಳಿಗಾಗಿ ವಿಮಾನ ಬಳಸಬೇಕಿದ್ದರೆ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಅವರು ತಮ್ಮ ವೈಯಕ್ತಿಕ ಬಳಕೆಯ ವಾಹನಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿತಗೊಳಿಸಿದ್ದು, ಅತ್ಯಗತ್ಯವಿದ್ದಾಗ ಮಾತ್ರ ಅಧಿಕೃತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಗುಜರಾತ್ ರಾಜ್ಯಪಾಲರು ಹೆಲಿಕಾಪ್ಟರ್ ಅಥವಾ ವಿಮಾನಗಳ ಬದಲಿಗೆ ರಾಜ್ಯದೊಳಗೆ ಪ್ರಯಾಣಿಸಲು ರೈಲು ಮತ್ತು ಎಸ್‌ಟಿ ಬಸ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ. ಇನ್ನು ರಾಜ್ಯದ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ತಮ್ಮ ನಿಗದಿತ ಅಮೆರಿಕ ಪ್ರವಾಸವನ್ನು ರದ್ದುಗೊಳಿಸುವ ಮೂಲಕ ವಿದೇಶಿ ಪ್ರಯಾಣದ ವೆಚ್ಚಕ್ಕೆ ಕಡಿವಾಣ ಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular