ಅಂತಿಮ ದರ್ಶನದ ಬಳಿಕ ಆಶ್ರಮದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀ ಅಂತ್ಯಕ್ರಿಯೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ಇಂದು ಸಂಜೆ ಆಶ್ರಮದಲ್ಲೇ ಅಂತ್ಯಕ್ರಿಯೆ ನೆರವೇರಲಿದೆ.

ಬೆಳಗಿನ ಜಾವ ವಿಜಯಪುರದ ಸೈನಿಕ ಶಾಲೆಯಿಂದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸಾಗಿದ್ದು, ಸೈನಿಕ ಶಾಲೆ ಆವರಣದಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೈನಿಕ ಶಾಲೆ ಅಂಗಳದಲ್ಲಿ ಭಕ್ತರಿಗೆ ಟೀ, ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಜನಸಾಗರವೇ ನೆರೆದಿದೆ.

ಶತಮಾನದ ಮಹಾಸಂತ ಸಿದ್ದೇಶ್ವರ ಸ್ವಾಮಿ ವಿಧಿವಶರಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ಇಂದು ಸಂಜೆ ಆಶ್ರಮದಲ್ಲಿ ಸ್ವಾಮೀಜಿ ಅಂತ್ಯಕ್ರಿಯೆ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದ್ದು, ನಾಡಿನ ಗಣ್ಯರು, ಸ್ವಾಮೀಜಿಗಳು, ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆಯಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read