HomeKarnatakaBREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಂಸದ ಡಿ.ಕೆ. ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ಅವರು ರಾಷ್ಟ್ರದ್ರೋಹಿಗಳು. ಅವರ ರೀತಿ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿಯವರಿಗೆ ಒತ್ತಾಯಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular