HomeKarnatakaಈಡೇರಲಿದೆ ಬಹುಕಾಲದ ಬೇಡಿಕೆ: ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ: ಸಚಿವ ಪರಮೇಶ್ವರ್ ಘೋಷಣೆ

ಈಡೇರಲಿದೆ ಬಹುಕಾಲದ ಬೇಡಿಕೆ: ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ: ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು: ಬಹುಕಾಲದ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸಂವಿಧಾನ ಬಳಗದ ವತಿಯಿಂದ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಲಿತ ಸಮುದಾಯದ ಅನೇಕ ವರ್ಷಗಳ ಬೇಡಿಕೆಯಾಗಿರುವ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಕಂಪಾನಿಗಳಲ್ಲಿ ಮೀಸಲಾತಿ ಜಾರಿಗೆ ತಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆ ಬಹುಕಾಲದಿಂದಲೂ ಇತ್ತು. ಇದನ್ನು ಜಾರಿಗೆ ತರಲು ಶೀಘ್ರವೇ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಸುಮಾರು ಎರಡೂವರೆ ಲಕ್ಷ ಹುದ್ದೆ ಖಾಲಿ ಇವೆ. ಅದರಲ್ಲಿ 50 ರಿಂದ 60 ಸಾವಿರ ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿದ್ದು, ಅವುಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular