ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕಾಗುತ್ತೆ: ವಿಪಕ್ಷಗಳಿಗೆ ನೂತನ ಸಚಿವರ ತಿರುಗೇಟು

ಬೆಂಗಳೂರು: ಮುಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತರೂ ಬಿಜೆಪಿಗೆ ಇನ್ನೂ ಬುದ್ಧಿ ಬಂದಿಲ್ಲ. ಗ್ಯಾರಂಟಿಗಳನ್ನು ಜಾರಿ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಗ್ಯಾರಂಟಿ ಜಾರಿ ವಿಚಾರವಾಗಿ ಇಲಾಖಾವಾರು ತಯಾರಿ ಆಗಬೇಕಿದೆ. ಒಂದು ಕಮಿಟಿ ಕೂಡ ರಚನೆ ಆಗುತ್ತದೆ. ಸರ್ಕಾರ ಹೇಗೆ ನಡೆಯುತ್ತೆ ಎಂದು ಅವರಿಗೆ ಗೊತ್ತಿಲ್ವಾ ಎಂದು ಪರಮೇಶ್ವರ್ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಅವರು ಪ್ರತಿಭಟನೆ ಮಾಡಲಿ. ಅದಕ್ಕೆ ಸಮಯ ಬೇಕಲ್ಲ, ಸಮಯವನ್ನು ಕೊಡಬೇಕು ಎಂದು ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮೊದಲ ಕ್ಯಾಬಿನೆಟ್ ನಲ್ಲಿ ನಿರ್ಣಯ ಮಾಡಿ ಪಟ್ಟಿ ಸಿದ್ಧಪಡಿಸಿದ್ದೇವೆ. ಕರೆಂಟ್ ಬಿಲ್ ಕಟ್ಟಬೇಡಿ ಎಂದು ವಿಪಕ್ಷದವರು ಕರೆ ನೀಡಿದ್ದಾರೆ. ಗ್ಯಾರಂಟಿ ಜಾರಿಗೆ ಸಮಯಾವಕಾಶ ಬೇಕು. ಅದಕ್ಕೆ ಅವಕಾಶ ಕೊಡಬೇಕು. ಸರ್ಕಾರದಲ್ಲಿ ಇದ್ದವರು ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read