ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ.
ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ.