BIG NEWS: ಡಿ.ಕೆ.ಶಿವಕುಮಾರ್ ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್

ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಕಾಂಗ್ರೆಸ್ ವೀಕ್ ಆಗಿತ್ತು, ಆಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು, ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ. ಹಾಗಾಗಿ ಹೈಕಮಾಂಡ್ ನವರು ಮನಸ್ಸು ಮಾಡಿದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳಿದರು.

ಒಕ್ಕಲಿಗ ಸ್ವಾಮೀಜಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಭಿಮಾನದಿಂದ ಒಂದು ಮನವಿ ಮಾಡಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಹಿಂದೆ ಮಾಧ್ಯಮಗಳೇ ಹೆಳಿದ್ದವು. ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ ಇದು ದೊಡ್ಡ ಅಪರಾಧವಲ್ಲ ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯನವರಿಗೆ ಅಧಿಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬುದು ಗೊತ್ತಿದೆ. ಸಿದ್ದರಾಮಯ್ಯ ಸುದೀರ್ಘ ಕಾಲ ಮಂತ್ರಿ, ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. 15 ಬಾರಿ ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದವರುಯಾವ ರೀತಿ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಬಗ್ಗೆ ಅವರ ಅವರ ಜೀವನದಲ್ಲಿ ಸಾಕಷ್ಟು ಅನುಭವವಿರುವವರು. ಹಾಗಾಗಿ ಸಿದ್ದರಾಮಯ್ಯ ಈಗ ಸಡನ್ ಆಗಿ ಬಿದ್ದು ಬೀಳ್ತಾರೆ ಎಂದು ಹೇಳಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read