HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗಿಲ್ವಲ್ಲಾ? ಉತ್ತರನ ಪೌರುಷ ನಿಮ್ಮದು....; ಡಿಸಿಎಂ ವಿರುದ್ಧ...

BIG NEWS: ಸಿಎಂ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗಿಲ್ವಲ್ಲಾ? ಉತ್ತರನ ಪೌರುಷ ನಿಮ್ಮದು….; ಡಿಸಿಎಂ ವಿರುದ್ಧ ಜಿ.ಟಿ.ದೇವೇಗೌಡ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರದ್ದು ಉತ್ತರನ ಪೌರುಷ ಎಂದು ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು ಬಾರಿ ಅಧಿಕಾರ ಕೊಡಿ ಎಂದಿದ್ದರು. ಆದರೆ ನೀವು ಸಿಎಂ ಆದ್ರಾ? ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವ ಎದೆಗಾರಿಕೆ ನಿಮಗೆ ಇಲ್ವಲ್ಲ. ಉತ್ತರನ ಪೌರುಷ ನಿಮ್ಮದು ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೈತ್ರಿ ಸರ್ಕಾರ ಯಾರು ತೆಗೆದು ಹಾಕಿದ್ದು ಎಂಬುದು ಕುಮಾರಸ್ವಾಮಿಗೆ ಗೊತ್ತಿದೆ. ಈಗ ರಾಜ್ಯದ ಜನರಿಗೆ ಸತ್ಯ ಹೇಳಬೇಕು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಜಿಟಿಡಿ ಕಿಡಿಕಾರಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular