HomeKarnatakaಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂದ ಸಿಎಂ ಸಿದ್ದರಾಮಯ್ಯ; ಇದು ಕ್ಷೇತ್ರದ ಜನತೆಗೆ ಮಾಡಿದ ಅವಮಾನ ಎಂದು...

ಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂದ ಸಿಎಂ ಸಿದ್ದರಾಮಯ್ಯ; ಇದು ಕ್ಷೇತ್ರದ ಜನತೆಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದ ಜಿ.ಟಿ.ದೇವೇಗೌಡ

ಬೆಂಗಳೂರು: ಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಿಡಿ ಕಾರಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ನಾನು ಯಾರ ಸಹವಾಸದಲ್ಲಿದ್ದೆ ಅಂತ ಮೊದಲು ನೀವು ತಿಳಿದುಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

ನಾನು 5 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ನೀವು ರಾಜಶೇಖರ್ ಮೂರ್ತಿ, ನನ್ನ ವಿರುದ್ಧ ಸೋತಿದ್ದೀರಿ. 2013ರಲ್ಲಿ ನನ್ನನ್ನು ಸೋಲಿಸಲು ಬಂದಿದ್ದೀರಿ. ಆಗ ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲಸಕ್ಕೆ ಬಾರದವರನ್ನು ಗೆಲ್ಲಿಸಿದ್ದೀರಿ ಎಂಬ ನಿಮ್ಮ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರದ ಜನತೆಗೆ ಮಾಡಿದ ಅವಮಾನ. ಈ ಹಿಂದೆ ಸೋನಿಯಾ ಗಾಂಧಿಯವರನ್ನೇ ಬೈದಿದ್ದ ನೀವು ಈಗ ಯಾರ ಕಾಲಕೆಳಗೆ ಇದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಯಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಯಾರು? ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅವರ ಜೊತೆ ಸೇರಿರಲಿಲ್ವಾ? ಗೆಲ್ಲಿಸಿದವರನ್ನು ನೀವು ನೆನಪೂ ಮಾಡಿಕೊಳ್ಳುತ್ತಿಲ್ಲ. ಸಿಎಂ ಆಗಿದ್ದೀರಿ ಯಾರಿಗೂ ಅಗೌರವ ತೋರಿಸಬೇಡಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular