HomeIndiaಜಿ20 ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು: ವಿಶ್ವಸಂಸ್ಥೆ ಭದ್ರತಾ ಸಮಿತಿ ಶಾಶ್ವತ ಸದಸ್ಯ ಸ್ಥಾನದತ್ತ...

ಜಿ20 ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು: ವಿಶ್ವಸಂಸ್ಥೆ ಭದ್ರತಾ ಸಮಿತಿ ಶಾಶ್ವತ ಸದಸ್ಯ ಸ್ಥಾನದತ್ತ ಭಾರತ ಹೆಜ್ಜೆ

ನವದೆಹಲಿ: ಜಿ20 ಅಧ್ಯಕ್ಷ ರಾಷ್ಟ್ರವಾಗಿ ಭಾರತ ಒಟ್ಟಾರೆ ನಿರ್ವಹಣೆ, ಜ್ವಲಂತ ವಿಷಯಗಳ ಬಗ್ಗೆ ಜಿ20 ಸದಸ್ಯ ರಾಷ್ಟ್ರಗಳ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪ್ರಸ್ತುತ ನಡೆಯುತ್ತಿರುವ ಜಿ20 ಸಭೆಯ ಸಂದೇಶ ಜಾಗತಿಕವಾಗಿ ಭಾರತವನ್ನು ಮತ್ತಷ್ಟು ಬಲಶಾಲಿಯಾಗಿ ಮಾಡುವ ನಿರೀಕ್ಷೆ ಇದೆ. ಜಾಗತಿಕ ಪ್ರಬಲ ಆರ್ಥಿಕತೆಯಾಗಿ ಹೊರ ಹೊಮ್ಮುತ್ತಿರುವ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸದಸ್ಯತ್ವ ಇನ್ನೂ ಸಿಕ್ಕಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಭಾರತ ಭೇಟಿಯಲ್ಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ನಂತರ ಭಾರತ ವಿಶ್ವಸಂಸ್ಥೆ ಭದ್ರತಾ ಸಮಿತಿಯಲ್ಲಿ ಸದಸ್ಯತ್ವ ಪಡೆದುಕೊಳ್ಳಲು ಬೆಂಬಲಿಸುವುದಾಗಿ ಹೇಳಿದ್ದಾರೆ. ಅಮೆರಿಕ ಈ ಹಿಂದೆಯೂ ಹಲವು ಬಾರಿ ಈ ರೀತಿಯ ಘೋಷಣೆ ಮಾಡಿದೆ. ಪ್ರಸ್ತುತ ಜಿ20 ಅಧ್ಯಕ್ಷ ರಾಷ್ಟ್ರವಾಗಿ ಭಾರತ ಸಮಸ್ತ ನಿರ್ವಹಣೆ ತೋರಿದ್ದು, ವಿಶ್ವಸಂಸ್ಥೆ ಭದ್ರತಾ ಸಮಿತಿ ಶಾಶ್ವತ ಸದಸ್ಯ ಸ್ಥಾನದತ್ತ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular