ಭಾರತ ಪ್ರವಾಸಕ್ಕೆ ಎದುರು ನೋಡುತ್ತಿದ್ದೇನೆ, ಚೀನಾ ಅಧ್ಯಕ್ಷರ ಗೈರು ನಿರಾಸೆ ತಂದಿದೆ: ಅಮೆರಿಕ ಅಧ್ಯಕ್ಷ ಜೋ ಬಿಡೆನ್

ನವದೆಹಲಿ: ಜಿ 20 ಶೃಂಗಸಭೆಗಾಗಿ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿದ್ದೇನೆ. ಕ್ಸಿ ಜಿನ್‌ಪಿಂಗ್ ಭಾಗವಹಿಸದಿರುವುದು ನಿರಾಸೆ ತಂದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತ ಭೇಟಿಗಾಗಿ ಎದುರು ನೋಡುತ್ತಿದ್ದೇನೆ ಎಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡನ್ ಹೇಳಿದ್ದು, ಆದರೆ ಚೀನಾದ ಅಧ್ಯಕ್ಷ ಕ್ಸಿ ಜಿಪಿಂಗ್ ಶೃಂಗಸಭೆಯಲ್ಲಿ ಭಾಗವಹಿಸದಿರುವುದು ನಿರಾಶೆಯಾಗಿದೆ ಎಂದು ತಿಳಿಸಿದ್ದಾರೆ.

ಎರಡು ಡಜನ್‌ಗೂ ಹೆಚ್ಚು ವಿಶ್ವ ನಾಯಕರೊಂದಿಗೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ಆಯೋಜಿಸುತ್ತಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಜೋ ಬಿಡೆನ್ ನಿರ್ಧರಿಸಿದ್ದಾರೆ.

ಯುಎಸ್ ಅಧ್ಯಕ್ಷ ಬಿಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಯುಕೆ ಪ್ರಧಾನಿ ರಿಷಿ ಸುನಕ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಈಗಾಗಲೇ ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿದ ಜಿ20 ನಾಯಕರಲ್ಲಿ ಸೇರಿದ್ದಾರೆ.

ಮೋದಿ ಅವರು ಸೆಪ್ಟೆಂಬರ್ 10 ರಂದು ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ ಜಿ 20 ಅಧ್ಯಕ್ಷ ಸ್ಥಾನ ಹಸ್ತಾಂತರಿಸಲಿದ್ದಾರೆ. ಬ್ರೆಜಿಲ್ ಔಪಚಾರಿಕವಾಗಿ ಡಿಸೆಂಬರ್ 1 ರಂದು G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.

G20 ಸದಸ್ಯ ರಾಷ್ಟ್ರಗಳು ಜಾಗತಿಕ GDP ಯ ಸುಮಾರು 85 ಪ್ರತಿಶತವನ್ನು ಪ್ರತಿನಿಧಿಸುತ್ತವೆ, ಜಾಗತಿಕ ವ್ಯಾಪಾರದ 75 ಪ್ರತಿಶತಕ್ಕಿಂತ ಹೆಚ್ಚು ಮತ್ತು ವಿಶ್ವದ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು.

ಈ ಗುಂಪು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ ಮತ್ತು ಯುರೋಪಿಯನ್ ದೇಶಗಳನ್ನು ಒಳಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read