HomeKarnatakaBREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯಾ(16), ಮಗ ವಿಜಯ್(12) ಮೃತಪಟ್ಟವರು ಎಂದು ಹೇಳಲಾಗಿದೆ. ಕಾರ್ ನಲ್ಲಿ ಕಲ್ಲಾಪುರ ಬಸವೇಶ್ವರ ದೇವಸ್ಥಾನಕ್ಕೆ ತೆರಳುವಾಗ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular