HomeKarnatakaBREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ದಂಪತಿ ಸಾವು: ಮಕ್ಕಳಿಗೆ ಗಂಭೀರ ಗಾಯ

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ದಂಪತಿ ಸಾವು: ಮಕ್ಕಳಿಗೆ ಗಂಭೀರ ಗಾಯ

ಗದಗ: ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿಯಲ್ಲಿ ನಡೆದಿದೆ.

ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ.

ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರು ಮಕ್ಕಳನ್ನು ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದ ಕುಟುಂಬ ಕಾರ್ ನಲ್ಲಿ ಬಾಗಲಕೋಟೆ ಕಡೆಗೆ ಹೊರಟಿತ್ತು. ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನರಗುಂದ ಸಿಪಿಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular