HomeKarnatakaBREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ.

ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular