HomeKarnatakaನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಗದಗ ಗ್ರಾಮಾಂತರ ಪಿಎಸ್ಐ ಶಿವಾನಂದ ಪಾಟೀಲ್ ಅವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಪಿಐ ಧೀರಜ್ ಶಿಂಧೆ ಫೈರಿಂಗ್ ಮಾಡಿದ್ದಾರೆ. ಆರೋಪಿಯನ್ನು ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಿಎಸ್ಐ ಶಿವಾನಂದ ಪಾಟೀಲ್ ತಲೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಿಯಲ್ ಎಸ್ಟೇಟ್ ವಿಚಾರವಾಗಿ ಪ್ರಕಾಶ್ ಅವರ ಮೊದಲ ಪತ್ನಿಯ ಮಗ ವಿನಾಯಕ್ ತಂದೆಯ ಕೊಲೆಗೆ ಫೈರೋಜ್ ಖಾಜಿಗೆ 65 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದ. ಮನೆಗೆ ನುಗ್ಗಿದ್ದ ಹಂತಕರು ಪ್ರಕಾಶ್ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ, ಲಕ್ಷ್ಮಿ, ಆಕಾಂಕ್ಷಾ ಅವರನ್ನು ಕೊಲೆ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular