BREAKING NEWS: ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ನಿರ್ಮಿತಿ ಕೇಂದ್ರದ ಇಂಜಿನಿಯರ್

ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾದ ಇಂಜಿನಿಯರ್. ಬೆಳಿಗ್ಗೆ 7:30ಕ್ಕೆ ಮನೆಯಿಂದ ಹೊರ ಹೋಗಿದ್ದ ಇಂಜಿನಿಯರ್ ಶಂಕರಗೌಡ ಪಾಟೀಲ್, ಬಳಿಕ ನಗರದ ಪಲ್ಲವಿ ಲಾಡ್ಜ್ ಗೆ ಆಗಮಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಲ್ಲವಿ ಲಡ್ಜ್ ನ ರೂಂ ನಂಬರ್ 513ರಲ್ಲಿ ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read