HomeKarnatakaBREAKING NEWS: ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ನಿರ್ಮಿತಿ ಕೇಂದ್ರದ ಇಂಜಿನಿಯರ್

BREAKING NEWS: ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ನಿರ್ಮಿತಿ ಕೇಂದ್ರದ ಇಂಜಿನಿಯರ್

ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾದ ಇಂಜಿನಿಯರ್. ಬೆಳಿಗ್ಗೆ 7:30ಕ್ಕೆ ಮನೆಯಿಂದ ಹೊರ ಹೋಗಿದ್ದ ಇಂಜಿನಿಯರ್ ಶಂಕರಗೌಡ ಪಾಟೀಲ್, ಬಳಿಕ ನಗರದ ಪಲ್ಲವಿ ಲಾಡ್ಜ್ ಗೆ ಆಗಮಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಲ್ಲವಿ ಲಡ್ಜ್ ನ ರೂಂ ನಂಬರ್ 513ರಲ್ಲಿ ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular