HomeKarnatakaಬರ ತಾಲೂಕು ಪಟ್ಟಿಗೆ ಗದಗ ಸೇರಿಸದಿದ್ದರೆ ರಾಜೀನಾಮೆ: ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಎಚ್ಚರಿಕೆ

ಬರ ತಾಲೂಕು ಪಟ್ಟಿಗೆ ಗದಗ ಸೇರಿಸದಿದ್ದರೆ ರಾಜೀನಾಮೆ: ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಎಚ್ಚರಿಕೆ

ಗದಗ: ಬರ ಪೀಡಿತ ತಾಲೂಕು ಪ್ರದೇಶ ಪಟ್ಟಿಗೆ ಗದಗ ಸೇರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ತಮ್ಮದೇ ಸರ್ಕಾರದ ಬಗ್ಗೆ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಕಿಡಿಕಾರಿದ್ದು ಮುಖ್ಯಮಂತ್ರಿಗಳು ಸಮೀಕ್ಷೆ ನಡೆಸಿದರೂ ಬರ ಘೋಷಿಸಿಲ್ಲ ಎಂದು ಟೀಕಿಸಿದ್ದಾರೆ. ಗದಗ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ಕೆ. ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಗುಡುಗಿದ್ದು, ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.

ಗದಗ ಜಿಲ್ಲೆಯ ಮುಳಗುಂದದಲ್ಲಿ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿರುವುದನ್ನು ವಿರೋಧಿಸಿ ರೈತ ಸಂಘ ಹಲವು ಸಂಘಟನೆಗಳು ಭಾನುವಾರ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹೆಚ್‌.ಕೆ. ಪಾಟೀಲ್, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಬರ ಪರಿಶೀಲನೆ ನಡೆಸಿದ್ದರೂ ಪಟ್ಟಿಗೆ ಗದಗ ತಾಲೂಕು ಸೇರಿಸಿಲ್ಲ ಎಂದು ಕಿಡಿಕಾರಿದ್ದಾರೆ. ಬರ ಪೀಡಿತ ಪ್ರದೇಶ ಪಟ್ಟಿಯಿಂದ ಕೈಬಿಟ್ಟಿರುವುದು ಅನ್ಯಾಯದ ಪರಮಾವಧಿಯಾಗಿದೆ ಎಂದು ತಮ್ಮದೇ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರ ಪೀಡಿತ ಪಟ್ಟಿಗೆ ಇನ್ನೂ ಹಲವು ತಾಲೂಕುಗಳು ಸೇರ್ಪಡೆ

ದಾವಣಗೆರೆ: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಒಂದೇ ಹಂತದಲ್ಲಿ ಘೋಷಿಸುವುದಿಲ್ಲ. ನಿಗದಿತ ಮಾನದಂಡಗಳಿಗೆ ಅರ್ಹವಾಗುವ ತಾಲೂಕುಗಳನ್ನು ಹಂತ ಹಂತವಾಗಿ ಪರಿಶೀಲಿಸಿ, ಗ್ರೌಂಡ್ ಟ್ರೂಥಿಂಗ್ ನಡೆಸಿದ ಬಳಿಕ ಘೋಷಿಸಲಾಗುವುದು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬಳಿಕ 24 ತಾಲೂಕುಗಳನ್ನು ಸೇರಿಸಲಾಗಿದೆ. ಇನ್ನೂ 52 ತಾಲೂಕುಗಳನ್ನು ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಘೋಷಿಸುತ್ತೇವೆ. ಮುಂದಿನ ಹಂತದಲ್ಲಿ ಸುಮಾರು 50 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಮುಂಗಾರು ಅವಧಿ ಪೂರ್ಣಗೊಳ್ಳುವವರೆಗೂ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಜಗಳೂರು ಸೇರಿದಂತೆ ಈಗ ಪಟ್ಟಿಯಲ್ಲಿ ಇಲ್ಲದ ತಾಲೂಕುಗಳೂ ಮುಂದಿನ ಹಂತಗಳಲ್ಲಿ ಅರ್ಹತೆ ಪಡೆದಲ್ಲಿ ಘೋಷಣೆಯಾಗಲಿವೆ. ಹೀಗಾಗಿ ತಮ್ಮ ತಾಲೂಕು ಇನ್ನೂ ಪಟ್ಟಿಗೆ ಸೇರಿಲ್ಲ ಎಂಬ ಆತಂಕ ಯಾರಿಗೂ ಬೇಡ ಎಂದರು.

ಬರ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ : ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಬರದಿಂದ ಉಂಟಾಗಿರುವ ನಷ್ಟ, ರೈತರಿಗೆ ನೆರವು ಹಾಗೂ ಕೇಂದ್ರ ಸರ್ಕಾರದಿಂದ ದೊರೆಯಬೇಕಾದ ಪರಿಹಾರದ ಕುರಿತು ಸದನದಲ್ಲಿ ವಿಪಕ್ಷಗಳ ಅಭಿಪ್ರಾಯ ಪಡೆಯಲಾಗುವುದು ಎಂದು ಹೇಳಿದ್ದಾರೆ.

 ಬರ ಪರಿಹಾರ ಮತ್ತು ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತು ಚರ್ಚಿಸಲಾಗುವುದು. ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಬೇಡಿಕೆಗಳನ್ನು ಮಂಡಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular