HomeKarnatakaಹೆರಿಗೆ ನೋವೆಂದ ಗರ್ಭಿಣಿಗೆ ಕಪಾಳ ಮೋಕ್ಷ: ಗರ್ಭದಲ್ಲೇ ಶಿಶು ಸಾವು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹೆರಿಗೆ ನೋವೆಂದ ಗರ್ಭಿಣಿಗೆ ಕಪಾಳ ಮೋಕ್ಷ: ಗರ್ಭದಲ್ಲೇ ಶಿಶು ಸಾವು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗದಗ: ಗದಗ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯರು ಅಮಾನವೀಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಸಕಾಲಕ್ಕೆ ವೈದ್ಯರು ಹೆರಿಗೆ ಮಾಡಿಸದ ಕಾರಣ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವೈದ್ಯರು ಕಪಾಳಮೋಕ್ಷ ಮಾಡಿದ್ದಾರೆ. ಹೆರಿಗೆಗೆ ಕರೆದುಕೊಂಡು ಬಂದಿದ್ದ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಕಪಾಳ ಮೋಕ್ಷ ಮಾಡಿದ್ದಲ್ಲದೆ ಒಂಟಿಕಾಲಲ್ಲಿ ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಮ್ಸ್ ವೈದ್ಯರ ದೌರ್ಜನ್ಯ ಖಂಡಿಸಿ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಮ್ಸ್ ಎದುರು ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಕಡೆ ಮಗು ಕಳೆದುಕೊಂಡು ಬಾಣಂತಿ ಹಾಗೂ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಗರ್ಭದಲ್ಲೇ ಮಗು ಮೃತಪಟ್ಟಿರುವ ಕುರಿತಾಗಿ ವೈದ್ಯರು ಸ್ಪಷ್ಟನೆ ನೀಡಿಲ್ಲ. ಮಹಿಳೆ ಮತ್ತು ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು, ಸಂಬಂಧಿಕರು ಧರಣಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular