BIG NEWS: ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್: ಸಂಬಂಧಿಕರ ಮನೆಗೆ ಬಂದಿದ್ದಾಗ ಘಟನೆ

ಗದಗ: ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಬಾಲಕನ ಸ್ಥಿತಿ ಗಂಭಿರವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಬಾಭವಾನಿ ನಗರದಲ್ಲಿ ನಡೆದಿದೆ.

3 ವರ್ಷದ ರುದ್ರಪ್ರಿಯ ನಾಯಿದಾಳಿಯಿಂದ ಗಂಭೀರ ಸ್ಥಿತಿಯಲ್ಲಿರುವ ಬಾಲಕ. ರುದ್ರಪ್ರಿಯ ತನ್ನ ತಂದೆ-ತಾಯಿ ಜೊತೆ ಸಂಬಂಧಿಕರ ಮನೆಗೆ ಬಂದಿದ್ದ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿ ಎಗರಿದ್ದು, ಬಾಲಕನ ಬಾಯಿ, ಹಣೆ, ಗಲ್ಲವನ್ನು ಕಚ್ಚಿ ಗಾಯಗೊಳಿಸಿದೆ.

ಬಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿನ ಸ್ಥಿತಿ ಕಂಡು ಪೋಷಕರು ಕಣ್ಣೀರಿಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read