HomeKarnatakaBREAKING NEWS: ಗದಗದಲ್ಲಿ ಡೆಂಘೀ ಮಹಾಮಾರಿಗೆ ಮೊದಲ ಬಲಿ: 5 ವರ್ಷದ ಬಾಲಕ ಸಾವು

BREAKING NEWS: ಗದಗದಲ್ಲಿ ಡೆಂಘೀ ಮಹಾಮಾರಿಗೆ ಮೊದಲ ಬಲಿ: 5 ವರ್ಷದ ಬಾಲಕ ಸಾವು

ಗದಗ: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದೆ. ಡೆಂಘೀ ಮಹಾಮಾರಿಗೆ ಮಕ್ಕಳು ಬಲಿಯಾಗುತ್ತಿರುವುದು ಆತಂಕ ಹೆಚ್ಚಿಸಿದೆ. ಗದಗ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಮೊದಲ ಬಲಿಯಾಗಿದೆ.

5 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಡೆಂಘೀ ಮಹಾಮಾರಿಗೆ ಬಲಿಯಾಗಿದ್ದಾನೆ. ಗದಗ ಜಿಲ್ಲೆಯ ಶಿರಂಜ ಗ್ರಾಮದ ಚಿರಾಯಿ ಹೊಸಮನಿ ಮೃತ ಬಾಲಕ. ಕೆಲ ದಿನಗಳಿಂದ ಬಾಲಕ ತೀವ್ರ ಜ್ವರದಿಂದ ಬಳಲುತ್ತಿದ್ದ.

ಗದಗ ಜಿಲ್ಲಾಸ್ಪತ್ರೆಗೆ ಬಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್ ಡಿ ಎಂ ಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular