ಗದಗ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಗದಗದಲ್ಲಿ ಕಲೇಜು ಉಪನ್ಯಾಸಕಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಗದಗ ನಿವಾಸಿ ಪ್ರಭಾ ಕಲ್ಮಠ (48) ಹೃದಯಾಘಾತಕ್ಕೆ ಬಲಿಯಾದ ಮಹಿಳೆ. ಸೊರಟೂರಿನ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.