ಗದಗ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಜಿಲ್ಲೆ ಜಿಲ್ಲೆಗಳಲ್ಲಿಯೂ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಗದಗ ಜಿಲ್ಲೆಯಲ್ಲಿ 42 ವರ್ಷದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶೋಭಾ ವಡಕಣ್ಣವರ (42) ಮೃತ ಮಹಿಳೆ. ಆರೋಗ್ಯವಾಗಿಯೇ ಇದ್ದ ಶೋಭಾ ಅವರಿಗೆ ನಿನ್ನೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಲಕ್ಷ್ಮೀಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇಂದು ಚಿಕಿತ್ಸೆ ಪಡೆಯುತ್ತಿದ್ದರೂ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.