HomeKarnatakaBREAKING : ನಾಪತ್ತೆಯಾಗಿದ್ದ ಗದಗ KRIDL ಎಇಇ ಪರ್ವೇಜ್ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ!

BREAKING : ನಾಪತ್ತೆಯಾಗಿದ್ದ ಗದಗ KRIDL ಎಇಇ ಪರ್ವೇಜ್ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ!

ಗದಗ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಪರ್ವೇಜ್ ಧಾರವಾಡ ಅವರನ್ನು ಗದಗ ಪೊಲೀಸರು ಪತ್ತೆಹಚ್ಚಿದ್ದಾರೆ.

ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪರ್ವೇಜ್ ಅವರು ಪತ್ತೆಯಾಗಿದ್ದು, ಪರ್ವೀಜ್ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭೋಪಾಲ್ ನಲ್ಲಿ ಬೀಡುಬಿಟ್ಟಿರುವ ಪೊಲೀಸರು ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ.

 ಪರ್ವೇಜ್ ಅವರು ನಾಪತ್ತೆಯಾಗಿದ್ದ ಪ್ರಕರಣ ಗದಗ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಅವರು ಮೊಬೈಲ್ ಫೋನ್ ಹಾಗೂ ಆನ್‌ಲೈನ್ ಬ್ಯಾಂಕಿಂಗ್ ಬಳಕೆ ಮಾಡದೆ ಇರುವ ಹಿನ್ನೆಲೆಯಲ್ಲಿ ಅವರ ಸುಳಿವು ಪತ್ತೆಹಚ್ಚುವುದು ಪೊಲೀಸರಿಗೆ ಕಷ್ಟವಾಗಿತ್ತು.ಸಿಸಿಟಿವಿ ದೃಶ್ಯ ಆಧರಿಸಿ ಅವರನ್ನು ಪತ್ತೆ ಹಚ್ಚಿ ಕರೆತರುವ ಪ್ರಯತ್ನದಲ್ಲಿದ್ದಾರೆ ಪೊಲೀಸರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸರ್ಕಾರದಿಂದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಹಣಕ್ಕಾಗಿ ಒತ್ತಡ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಪರ್ವೇಜ್ ಅವರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದರು.

ಐದು ವಿಶೇಷ ತಂಡಗಳಿಂದ ಹುಡುಕಾಟ

ಪರ್ವೇಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಲ್ಲಿ ತೀವ್ರ ಶೋಧ ನಡೆಸಲಾಗಿತ್ತು.

ಪರ್ವೇಜ್ ಅವರ ಮೊಬೈಲ್ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಸುಳಿವು ಇಲ್ಲದ ಕಾರಣ, ರೈಲ್ವೆ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದರು. ಇದೀಗ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಅವರು ಪತ್ತೆಯಾಗಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ.

ತಂದೆಗೆ ಸಚಿವರಿಂದ ಧೈರ್ಯ

ಪರ್ವೇಜ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಅವರ ತಂದೆ ಜಾಫರ್ ಸಾಬ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಧೈರ್ಯ ತುಂಬಿದ್ದರು. ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಹಾಗೂ ಯಾವುದೇ ಆರ್ಥಿಕ ಸಮಸ್ಯೆಗಳಿದ್ದರೂ ಬಗೆಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು ಎನ್ನಲಾಗಿದೆ.

ಅವರು ಏಕೆ ನಾಪತ್ತೆಯಾಗಿದ್ದರು, ಅವರ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಅಂಶಗಳೇನು ಹಾಗೂ ನಾಪತ್ತೆಯಾದ ಅವಧಿಯಲ್ಲಿ ಎಲ್ಲಿದ್ದರು ಎಂಬುದರ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಅಕ್ಟೋಬರ್ 4 ರಂದು ಬಳ್ಳಾರಿಗೆ ‘ಎನ್‌ಪಿಎಸ್ ಸಂಚಯ ಯಾತ್ರೆ’ ಆಗಮನ: ಸಾರ್ವಜನಿಕರಿಗೆ ಪಿಂಚಣಿ ಯೋಜನೆ ಕುರಿತು ಜಾಗೃತಿ

ಬಳ್ಳಾರಿ : ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಹಾಗೂ ಭವಿಷ್ಯದ ಆರ್ಥಿಕ ಭದ್ರತೆಯ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಎನ್‌ಪಿಎಸ್ ಸಂಚಯ ಯಾತ್ರೆ’ಯು ಅಕ್ಟೋಬರ್ 4 ರ ಭಾನುವಾರ ಬಳ್ಳಾರಿ ನಗರಕ್ಕೆ ಜಿಲ್ಲೆಗೆ ಆಗಮಿಸಲಿದೆ.

‘ಎನ್‌ಪಿಎಸ್ ದಿವಸ್ 2026’ ಅಭಿಯಾನದ ಅಂಗವಾಗಿ ಕೇಂದ್ರ ಹಣಕಾಸು ಸಚಿವರು ಅಕ್ಟೋಬರ್ 1 ರಂದು ನವದೆಹಲಿಯಲ್ಲಿ ಈ ಯಾತ್ರೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಕರ್ನಾಟಕದಲ್ಲಿ ಅಕ್ಟೋಬರ್ 1 ರಿಂದ 15 ರವರೆಗೆ ರಾಜ್ಯಾದ್ಯಂತ ಈ ಜಾಗೃತಿ ಯಾತ್ರೆ ಸಂಚರಿಸಲಿದ್ದು, ಅದರ ಭಾಗವಾಗಿ ಅಕ್ಟೋಬರ್ 4 ರಂದು ಬಳ್ಳಾರಿಯನ್ನು ತಲುಪಲಿದೆ.

ಬಳ್ಳಾರಿಗೆ ಆಗಮಿಸಲಿರುವ ವಿಶೇಷ ಪ್ರಚಾರ ವಾಹನದಲ್ಲಿ ತರಬೇತಿ ಪಡೆದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರಿಗೆ ಎನ್‌ಪಿಎಸ್ ಯೋಜನೆಯ ಪ್ರಯೋಜನಗಳು, ಖಾತೆ ತೆರೆಯುವ ವಿಧಾನ ಮತ್ತು ವಂತಿಗೆ ಪಾವತಿಸುವ ಕುರಿತು ಸ್ಥಳದಲ್ಲೇ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಜೊತೆಗೆ ನಾಗರಿಕರ ಅನುಮಾನಗಳನ್ನು ಪರಿಹರಿಸಿ, ಮಾಹಿತಿ ಕರಪತ್ರಗಳನ್ನು ವಿತರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರಿಗೆ ನೆರವು ನೀಡಲಿದ್ದಾರೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಲೀಡ್ ಬ್ಯಾಂಕ್ ನ ಮ್ಯಾನೇಜರ್ ಗಿರೀಶ್ ವಿ.ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular