ಗದಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಮಳೆಯ ಅಬ್ಬರದಿಂದಾಗಿ ಸಾಲು ಸಾಲು ಅನಾಹುತ ಸಭವಿಸಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ರಭಸವಾಗಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಬೈಕ್ ಸಮೇತ ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ಬೆನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಿರೇಕೊಪ್ಪ ಗ್ರಾಮದ ಮುತ್ತಪ್ಪ ಹಡಗಲಿ (39) ಮೃತ ವ್ಯಕ್ತಿ.
ವರುಣಾರ್ಭಟಕ್ಕೆ ಹಳ್ಳದ ನೀರು ತುಬಿ ಹರಿಯುತ್ತಿದ್ದ ವೇಳೆ ಬೈಕ್ ನಲ್ಲಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸತತ ಶೋಧ ನಡೆಸಿ, ಬೈಕ್ ಸವಾರನ ಮೃತದೇಹವನ್ನು ಹೊರತೆಗೆದಿದೆ.
ಗದಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.