HomeLatest NewsBIG NEWS: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

BIG NEWS: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

ಗದಗ: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಆರ್ಥಿಕ ಸಂಕಷ್ಟದಿಂದಾಗಿ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ದಯಾಮರಣ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಹಟ್ಟಿ ದಯಾಮರಣಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದವರು. ಮೇಲಾಧಿಕಾರಿಗಳ ಕಿರುಕುಳ, ವೇತನ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದು, ಜೀವನ ನಿರ್ವಹಣೆಯೂ ಕಷ್ಟ ಸಾಧ್ಯವಗುತ್ತಿದೆ. ತನಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕಂದಾಯ ಇಲಾಖೆಯ ತಾಲೂಕಾಡಳಿತ ವ್ಯವಸ್ಥೆ ಹಾಗೂ ಮೇಲಾಧಿಕಾರಿಗಳು ಇಲಾಖೆ ಕೆಲಸ ಸಮರ್ಪಕವಾಗಿ ನಿರ್ವಹಿಸಿದರೂ ಕಿರುಕುಳ ನೀಡುತ್ತಿದ್ದಾರೆ. ಪದೇ ಪದೇ ಅನಗತ್ಯವಾಗಿ ನೋಟಿಸ್ ನೀಡುತ್ತಿರುವುದಲ್ಲದೇ ಕಳೆದ ಎರಡು ತಿಂಗಳಿಂದ ವೇತನ ತಡೆಹಿಡಿದಿದ್ದಾರೆ. ಮನೆಯಲ್ಲಿ ಅನಾರೋಗ್ಯ ಪೀಡಿತ ತಾಯಿ ಇದ್ದಾರೆ. ಜೊತೆಗೆ ನನಗೂ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜೀವನವೇ ಕಷ್ಟಕರವಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಪೋಷಿಸುವ ಜವಾಬ್ದಾರಿಯಿದೆ. ಸರ್ಕಾರಿ ಕೆಲಸದಲ್ಲಿದ್ದರೂ ನನಗೆ ಸರಿಯಾಗಿ ಸಂಬಳವನ್ನೂ ನೀಡುತ್ತಿಲ್ಲ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸಂಕಟ ಅನುಭವಿಸುತ್ತಿದ್ದೇನೆ. ದಯವಿಟ್ಟು ದಯಾಮರಣ ನೀಡುವ ಮೂಲಕ ನನ್ನನ್ನು ದು:ಸ್ಥಿತಿಯಿಂದ ಮುಕ್ತಿಗೊಳಿಸಿ ಎಂದು ಯೋಗೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular