HomeKarnatakaಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಗದಗ: ಗದಗದಲ್ಲಿ ಸುಟ್ತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಅನೈತಿಕ ಸಂಬಂಧಕ್ಕೆ ಕೊಲೆಯಾಗಿರುವ ಬಗ್ಗೆ ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಗದಗ ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿದ್ದ. ಬಳಿಕ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು ಅದೇ ಗ್ರಾಮದ ರತ್ನಾ ಕುದರಿ ನಡುವೆ ಕಳೆದ ಕೆಲವು ಸಮಯದಿಂದ ಅನೈತಿಕ ಸಂಬಂಧವಿತ್ತು. ರತ್ನಾಳಿಗೆ ಶಿರಹಟ್ಟಿ ತಾಲೂಕಿನ ಹೊಳಲಾಪುರ ಗ್ರಾಮದ ಈರಪ್ಪ ಎಂಬಾತನೊಂದಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ರತ್ನಾ, ಪದೇ ಪದೇ ತವರು ಮನೆಗೆ ಬಂದು ಚಂದ್ರು ಜೊತೆಗಿನ ಸಂಬಂಧ ಮುಂದುವರಿಸಿದ್ದಳು. ಈ ವಿಷಯ ರತ್ನಾಳ ಪತಿ ಈರಪ್ಪ ಹಾಗೂ ಸಹೋದರ ಮಹಾಂತೇಶನಿಗೆ ತಿಳಿದು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ ಇಬ್ಬರೂ ಕೇಳಿರಲಿಲ್ಲ.

ಇದೇ ಕಾರಣಕ್ಕೆ ಚಂದ್ರು ಕುರಿಯನ್ನು ಮುಗಿಸಲು ರತ್ನಾ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಪ್ಲಾನ್ ಮಾಡಿದ್ದಾರೆ. ಅದರಂತೆ ಮಾರ್ಚ್ 25ರ ಮಧ್ಯರಾತ್ರಿ ರತ್ನಾಳ ಕೈಯಿಂದಲೇ ಚಂದ್ರುಗೆ ಫೋನ್ ಮಾಡಿಸಿ ಮನೆಗೆ ಕರೆಸಿಕೊಂಡಿದ್ದಾರೆ. ಚಂದ್ರು ಬಂದಾಗ ಮನೆಯ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ಈರಪ್ಪ ಮತ್ತು ಮಹಾಂತೇಶ ಆತನ ಮೇಲೆರಗಿದ್ದಾರೆ. ಬಳಿಕ ಮಾತನಾಡಬೇಕು ಎಂದು ನಿರ್ಜನ ಪ್ರದೇಶದ ಬ್ರಿಡ್ಜ್ ಬಳಿ ಕರೆದೊಯ್ದು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಶವದ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿ ಅಲ್ಲಿಂದ ಪರಾರಿಯಾಗಿದ್ದರು ಎಂಬುದು ತನಿಖೆಯಲ್ಲಿ ತಿಳಿದಿಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular