HomeLatest NewsBIG NEWS: ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಡಿ ಗ್ರೂಪ್ ನೌಕರ

BIG NEWS: ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಡಿ ಗ್ರೂಪ್ ನೌಕರ

ಗದಗ: ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.

35 ವರ್ಷದ ಮೈಲಾರಲಿಂಗೇಶ್ವರ ಆತ್ಮಹತ್ಯೆಗೆ ಶರಣಾದ ನೌಕರ. ಆಯುಷ್ ಇಲಾಖೆ ನಡೆಸುತ್ತಿದ್ದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರೆ ಗ್ರಾಮದ ನಿವಾಸಿಯಾಗಿದ್ದ ಮೈಲಾರಲಿಂಗ ಗದಗ ಜಿಲ್ಲೆಯ ಬೆಟಗೇರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಸ್ಪತ್ರೆಯಲ್ಲಿ ಜಗಳ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಕೆಲಸದ ಒತ್ತಡವೂ ಇರಲಿಲ್ಲ. ಆಸ್ಪತ್ರೆಯ ಒಳಗಡೆ ಬಾಗಿಲು ಲಾಕ್ ಮಾಡಿಕೊಂಡಿದ್ದ ಮೈಲಾರಲಿಂಗ ಇಂದು ಸಾವಿಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular