HomeKarnatakaಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 4.37 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಹಿರಿಯೂರು ನಗರಸಭೆ ಸದಸ್ಯ ಜಗದೀಶ್ ಸೇರಿ 14 ಜನರನ್ನು ಬಂಧಿಸಲಾಗಿದೆ. ಮತ್ತಿಬ್ಬರು ನಗರಸಭೆ ಸದಸ್ಯರಾದ ಅನಿಲಕುಮಾರ್, ಅಜ್ಜಪ್ಪ ಪರಾರಿಯಾಗಿದ್ದಾರೆ. ಮೂವರು ನಗರಸಭೆ ಸದಸ್ಯರು, ಪ್ರವಾಸಿ ಮಂದಿರದ ಮೇಟಿ ನಾಸಿರ್ ಸೇರಿ ಹಲವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular