HomeKarnatakaಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಎರಡು ಪ್ರಕರಣ ದಾಖಲಾಗಿವೆ. ಮುಂಜಾಗ್ರತೆ ಕ್ರಮವಾಗಿ ಅರಬಿಳಚಿ ಕ್ಯಾಂಪ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 2 ಕೆ.ಎಸ್.ಆರ್.ಪಿ. ತುಕಡಿಗಳನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular