HomeKarnatakaನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ: ಗಣಪತಿ ಪೂಜೆ ಬಗ್ಗೆ ಸಾಣೆಹಳ್ಳಿ ಶ್ರೀ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ: ಗಣಪತಿ ಪೂಜೆ ಬಗ್ಗೆ ಸಾಣೆಹಳ್ಳಿ ಶ್ರೀ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

ಚಾಮರಾಜನಗರ: ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ ಎಂದು ಗಣಪತಿ ಪೂಜೆಗೆ ಸಂಬಂಧಿಸಿದಂತೆ ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಕಮ್ಯುನಿಸ್ಟ್, ನಕ್ಸಲೆಟ್ ಆಗಬೇಕಾಗಿದ್ದವರು ಕಾವಿ ಹಾಕಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗಾಗಿ ಹಿಂದೂ ವಿರೋಧಿ ಹೇಳಿಕೆಗಳನ್ನು ಸ್ವಾಮೀಜಿ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಸಂಸ್ಕೃತಿಯ ಆಧಾರದಲ್ಲಿ ವೀರಶೈವ ಲಿಂಗಾಯತ ಸಮುದಾಯ ಬರುತ್ತೆ. ನಾವು ಗಣಪತಿ ಪೂಜೆ ಮಾಡಿಯೇ ಧಾರ್ಮಿಕ ಕಾರ್ಯಕ್ರಮ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ವರ್ಷ ಒಬ್ಬ ಸ್ವಾಮೀಜಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿದ್ದು, ಮುಂದಿನ ವರ್ಷ ತಮಗೂ ಯಾವುದಾದರೂ ಪ್ರಶಸ್ತಿ ಸಿಗಲಿ ಎಂದು ಉಳಿದವರು ಹಿಂದೂ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಪೇಮೆಂಟ್ ಸಾಹಿತಿಗಳು, ಸ್ವಾಮೀಜಿಗಳಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular