HomeKarnataka'ಗಾಂಧಿ ಜಯಂತಿ' ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

‘ಗಾಂಧಿ ಜಯಂತಿ’ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿವಧೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.

ಅಕ್ಟೋಬರ್ 2, ಶುಕ್ರವಾರ ಗಾಂಧಿ ಜಯಂತಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವುದನ್ನು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ನಗರದ ಮಾಂಸ ಮಾರಾಟ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ಬಂದ್

ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಪ್ರಾಧಿಕಾರದ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಯದಂತೆ ಹಾಗೂ ಮಾಂಸ ಮಾರಾಟ ಮಾಡದಂತೆ ಸೂಚಿಸಲಾಗಿದೆ. ಅದೇ ರೀತಿ ಮಾಂಸ ಮಾರಾಟ ಮಳಿಗೆಗಳಲ್ಲಿಯೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪ ನಿರ್ದೇಶಕರು (ಪಶುಪಾಲನೆ) ಈ ಆದೇಶ ಹೊರಡಿಸಿದ್ದು, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಬೀಳಲಿದೆ.

 

ಅಲ್ಪಸಂಖ್ಯಾತರ ಓಲೈಕೆಗೆ ವಿಭಜನೆಯ ರಾಜಕೀಯ’: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೋಲಾರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ ಉರ್ದು ಹಬ್ಬ ಆಚರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ವಿಭಜನೆಯ ರಾಜಕೀಯ ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಉದ್ದೇಶದಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರ ಮೂರು ಭಾಷಾ ಸೂತ್ರವನ್ನು ಪ್ರಸ್ತಾಪಿಸಿದಾಗ, ಮಕ್ಕಳ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸಿತು. ಆದರೆ ಇದೀಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡದ ಬದಲಿಗೆ ಉರ್ದು ಹಬ್ಬ ಆಚರಿಸುವ ಮೂಲಕ ತನ್ನ ನಿಲುವನ್ನು ಸರ್ಕಾರವೇ ಬಹಿರಂಗಪಡಿಸಿದೆ” ಎಂದು ವಿಜಯೇಂದ್ರ ಹೇಳಿದರು.

ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕಾಂಗ್ರೆಸ್ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂದೂ ಅವರು ಆರೋಪಿಸಿದರು.

‘ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ’

“ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಹಾಗೂ ಸಮಾನ ಅವಕಾಶದ ದೃಷ್ಟಿಕೋನದಲ್ಲಿ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರಿಗೆ ಯೋಜನೆಗಳನ್ನು ನೀಡುವುದರ ಜೊತೆಗೆ ಹಿಂದೂಗಳು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗಕ್ಕೂ ಅಭಿವೃದ್ಧಿಯ ಯೋಜನೆಗಳು ತಲುಪಬೇಕು” ಎಂದು ವಿಜಯೇಂದ್ರ ಹೇಳಿದರು.

ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ಬದಲು ಸಮಾಜವನ್ನು ವಿಭಜಿಸುವ ರಾಜಕೀಯಕ್ಕೆ ಸರ್ಕಾರ ಮುಂದಾದರೆ, ಮುಂಬರುವ ಚುನಾವಣೆಯಲ್ಲಿ ಜನರು ತಮ್ಮ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.

SIR ಪ್ರಕ್ರಿಯೆ ಬಗ್ಗೆಯೂ ಆರೋಪ

SIR ಪ್ರಕ್ರಿಯೆ ವೇಳೆ ರಾಜ್ಯದ ಕೆಲವು ಕಡೆಗಳಲ್ಲಿ ಮುಸ್ಲಿಂ ಮತದಾರರನ್ನು ಮಸೀದಿಗಳು ಮತ್ತು ಮದುವೆ ಸಭಾಂಗಣಗಳಲ್ಲಿ ಸೇರಿಸಲಾಗಿತ್ತು ಹಾಗೂ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅಧಿಕಾರಿಗಳು ಅಲ್ಲಿಯೇ ಕುಳಿತಿದ್ದರು ಎಂಬ ಆರೋಪಗಳು ಕೇಳಿಬಂದಿವೆ ಎಂದು ವಿಜಯೇಂದ್ರ ಹೇಳಿದರು.

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಇತರರು ಇಂತಹ ಅಕ್ರಮಗಳ ಕುರಿತು ಚುನಾವಣಾ ಆಯೋಗದ ಗಮನಕ್ಕೆ ತರುತ್ತಿದ್ದಾರೆ ಎಂದು ಅವರು ತಿಳಿಸಿದರು.

“ಅಕ್ರಮವಾಗಿ ಸೇರ್ಪಡೆಯಾಗಿರಬಹುದು ಎಂದು ಶಂಕಿಸಲಾದ ಹೆಸರುಗಳನ್ನು ಚುನಾವಣಾ ಆಯೋಗ ಪರಿಶೀಲಿಸಿ, ಅಗತ್ಯವಿದ್ದರೆ ತೆಗೆದುಹಾಕುವಂತೆ ಮನವಿ ಮಾಡುವುದರಲ್ಲಿ ತಪ್ಪೇನಿಲ್ಲ. ಹೆಸರು ಸರಿಯಾಗಿದ್ದರೆ ಆಯೋಗ ಅದನ್ನು ಉಳಿಸಿಕೊಳ್ಳುತ್ತದೆ; ಅಕ್ರಮವಾಗಿದ್ದರೆ ತೆಗೆದುಹಾಕುತ್ತದೆ. ಅಂತಿಮವಾಗಿ ನಿರ್ಧಾರ ಕೈಗೊಳ್ಳಬೇಕಿರುವುದು ಚುನಾವಣಾ ಆಯೋಗವೇ” ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ತಡೆಯಲು ಸಾಧ್ಯವಾಗದವರು ಚುನಾವಣಾ ಆಯೋಗದ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಾಜ್ಯದ ಕೆಲವು ಕ್ಷೇತ್ರಗಳ ಮತದಾರರ ಪಟ್ಟಿಗೆ ಅಕ್ರಮವಾಗಿ ಬಾಂಗ್ಲಾದೇಶಿ ವಲಸಿಗರ ಹೆಸರುಗಳನ್ನು ಸೇರಿಸಲಾಗಿದೆ ಎಂಬ ದೂರುಗಳೂ ಬಂದಿವೆ ಎಂದು ವಿಜಯೇಂದ್ರ ಹೇಳಿದರು. ಇಂತಹ ಆರೋಪಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತಂದು ಪರಿಶೀಲನೆಗೆ ಒಳಪಡಿಸುವುದರಲ್ಲಿ ತಪ್ಪಿಲ್ಲ ಎಂದ ಅವರು, ಈ ವಿಚಾರದಲ್ಲಿ ತಮ್ಮ ವಿರುದ್ಧ FIR ದಾಖಲಾದರೂ ಅಥವಾ ಬೆದರಿಕೆ ಬಂದರೂ ತಾವು ಹೆದರುವುದಿಲ್ಲ ಎಂದು ಹೇಳಿದರು.

KPSC ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಆಗ್ರಹ

ಬಂಗಾರಪೇಟೆಯಲ್ಲಿ ಮಾತನಾಡಿದ ವಿಜಯೇಂದ್ರ, ಹಲವು ವರ್ಷಗಳಿಂದ KPSCಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಅಕ್ರಮಗಳಿಗೆ ರಾಜ್ಯ ಸರ್ಕಾರ ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಉದ್ಯೋಗ ಪಡೆಯುವ ಕನಸಿನಲ್ಲಿ ಯುವಕರು ವರ್ಷಗಳ ಕಾಲ ಕಷ್ಟಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು ಮತ್ತು ಗೊಂದಲಗಳಿಂದಾಗಿ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

KPSCಯನ್ನು ಮುಚ್ಚುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಬದಲಾಗಿ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು. ವರ್ಷಗಳ ಕಾಲ ಯುವಕರು ಮಾಡಿರುವ ಪರಿಶ್ರಮಕ್ಕೆ ನ್ಯಾಯ ಒದಗಿಸುವಂತಹ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ನಿರ್ಮಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular