HomeKarnatakaBIG NEWS: ಶಿವಮೊಗ್ಗ: ರಾತ್ರೋರಾತ್ರಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

BIG NEWS: ಶಿವಮೊಗ್ಗ: ರಾತ್ರೋರಾತ್ರಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗ: ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ.

ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆಯೇ ಗಾಂಧಿ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ತಡರಾತ್ರಿ ಕಿಡಿಗೇಡಿಗಳು ಈ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular