Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ 9,117, ಪಶ್ಚಿಮ 7,607, ಪೂರ್ವ 5,761, ಮಹದೇವಪುರ 2,452, ಯಲಹಂಕ 1,349, ಆರ್.ಆರ್.ನಗರ, 927, ಬೊಮ್ಮನಹಳ್ಳಿ 875 ಹಾಗೂ ದಾಸರಹಳ್ಳಿ ವಲಯದಲ್ಲಿ 2279 ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,82,312 ಮೂರ್ತಿಗಳನ್ನು ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಸೇರಿ 39 ಕೆರೆಗಳಲ್ಲಿ ಹಾಗೂ 419 ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read