ಧಾರವಾಡ : ಸಾರ್ವಜನಿಕರು ಗಣೇಶ ಪ್ರತಿಷ್ಠಾಪನೆ ಹಾಗೂ ವಿರ್ಸಜನೆಯನ್ನು ಅತೀ ವಿಜೃಂಭಣೆಯಿಂದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ, ಅಳ್ಳಾವರ, ಹುಬ್ಬಳ್ಳಿ, ಕಲಘಟಗಿ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್ 13, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 27, 2026 ರ ಮುಂಜಾನೆ 06 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಟವನ್ನು ನಿಷೇಧಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಆಜ್ಞೆ ಹೊರಡಿಸಿದ್ದಾರೆ.
ಈ ಕುರಿತು ಆದೇಶಿಸಿರುವ ಅವರು, ಗಣೇಶ ಹಬ್ಬವನ್ನು ಆಚರಿಸುವ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಹುಬ್ಬಳ್ಳಿ ತಾಲೂಕಿನಲ್ಲಿ ಗಣೇಶ ವಿಸರ್ಜನೆಯ 1ನೇ ದಿನದಿಂದ 3ನೇ ದಿನದವರೆಗೆ, ಸಪ್ಟೆಂಬರ್ 13, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 17, 2026 ರ ಮುಂಜಾನೆ 06 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿμÉೀಧಿಸಿ, ಆದೇಶಿಸಲಾಗಿದೆ.
ಧಾರವಾಡ ಜಿಲ್ಲಾ ವ್ಯಾಪ್ತಿಯ ತಾಲ್ಲೂಕುಗಳಾದ ಧಾರವಾಡ, ಅಳ್ನಾವರ, ಹುಬ್ಬಳ್ಳಿ, ಕಲಘಟಗಿ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಗಣೇಶ ವಿಸರ್ಜನೆಯ 1ನೇ ದಿನ ಸಪ್ಟೆಂಬರ್ 13, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 15, 2026 ರ ಮುಂಜಾನೆ 06 ಗಂಟೆಯವರೆಗೆ ಮತ್ತು 5ನೇ ದಿನ ಸಪ್ಟೆಂಬರ್ 17, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 19, 2026 ರ ಮುಂಜಾನೆ 06 ಗಂಟೆಯವರೆಗೆ, 7ನೇ ದಿನ ಸಪ್ಟೆಂಬರ್ 19, 2026 11:59 ಗಂಟೆಯಿಂದ ಸಪ್ಟೆಂಬರ್ 21, 2026 ರ ಮುಂಜಾನೆ 06 ಗಂಟೆಯವರೆಗೆ ಹಾಗೂ 9ನೇ ದಿನ ಸಪ್ಟೆಂಬರ್ 21, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 23, 2026 ರ ಮುಂಜಾನೆ 06 ಗಂಟೆಯವರೆಗೆ, 11ನೇ ದಿನ ಸಪ್ಟೆಂಬರ್ 23, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 25, 2026 ರ ಮುಂಜಾನೆ 06 ಗಂಟೆಯವರೆಗೆ, 13ನೇ ದಿನ ಸಪ್ಟೆಂಬರ್ 25, 2026 ರ ರಾತ್ರಿ 11:59 ಗಂಟೆಯಿಂದ ಸಪ್ಟೆಂಬರ್ 27, 2026 ರ ಮುಂಜಾನೆ 06 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿμÉೀಧಿಸಿ, ಆದೇಶಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀಯರ್ ಬಾರ್‍ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೆÇೀಗಳನ್ನು ಮುಚ್ಚತಕ್ಕದ್ದು, ಇದಲ್ಲದೇ ಪರಿಸ್ಥಿತಿಗನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‍ಸ್ಪೆಕ್ಟರರು ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಅಬಕಾರಿ ಉಪ ಆಯುಕ್ತರು, ಧಾರವಾಡ ಮತ್ತು ಅಧೀಕ್ಷಕರು, ಧಾರವಾಡ, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಧಾರವಾಡ ಮತ್ತು ಅಬಕಾರಿ ಉಪ ಅಧೀಕ್ಷಕರು (ವಿಚಕ್ಷಕ ದಳ), ಹುಬ್ಬಳ್ಳಿ ಇವರುಗಳು ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಧಾರವಾಡ : ಅರಣ್ಯ ಇಲಾಖೆಯ ವತಿಯಿಂದ ಸೆಪ್ಟೆಂಬರ್ 11, 2026 ರಂದು ಬೆಳಿಗ್ಗೆ 8:45 ಗಂಟೆಗೆ ಧಾರವಾಡ ಕೆ.ಸಿ.ಪಾರ್ಕ ಹತ್ತಿರದ ಅರಣ್ಯ ಸಂಕೀರ್ಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ.ವಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಭೂಷಣ್ ಬೋರಸೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್.ಘಾ, ಪೊಲೀಸ್ ಉಪ ಆಯುಕ್ತೆ ಶೃತಿ ಎನ್.ಎಸ್. ಸೇರಿದಂತೆ ಇತರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸುವರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

