HomeLatest Newsಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆ : 'ಡಿಜೆ ಸಿಸ್ಟಂ ಬಳಕೆ' ನಿಷೇಧ ಮುಂದುವರಿಕೆ

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಣೆ : ‘ಡಿಜೆ ಸಿಸ್ಟಂ ಬಳಕೆ’ ನಿಷೇಧ ಮುಂದುವರಿಕೆ

ಶಿವಮೊಗ್ಗ : ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular