HomeKarnatakaಸಾಲು ಸಾಲು ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ ಜನ; ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳ...

ಸಾಲು ಸಾಲು ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಹೊರಟ ಜನ; ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳ ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ…!

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಜನ: ಮೆಜೆಸ್ಟಿಕ್ ಸುತ್ತಮುತ್ತ ದಟ್ಟಣೆ

ಗೌರಿ – ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ವಾರಾಂತ್ಯದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದು, ಶುಕ್ರವಾರ ಸಂಜೆಯಿಂದಲೇ ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

ಸೆಪ್ಟಂಬರ್ 18 ರ ಸೋಮವಾರದಂದು ಗೌರಿ ಹಬ್ಬ ಹಾಗೂ ಸೆಪ್ಟೆಂಬರ್ 19ರ ಮಂಗಳವಾರ ಗಣೇಶ ಚತುರ್ಥಿ ಇದ್ದು, ಹೀಗಾಗಿ ಶುಕ್ರವಾರ ಸಂಜೆಯಿಂದಲೇ ಜನ ಊರುಗಳತ್ತ ತೆರಳುತ್ತಿದ್ದಾರೆ. ಇಂದೂ ಕೂಡ ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲು ನಿಲ್ದಾಣ ಪ್ರಯಾಣಿಕರಿಂದ ಗಿಜಿಗುಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿರುವ ಖಾಸಗಿ ಬಸ್ ನವರು ಪ್ರಯಾಣದರ ಏರಿಕೆ ಮಾಡದಂತೆ ಸಂಬಂಧ ಪಟ್ಟ ಇಲಾಖೆಯ ಎಚ್ಚರಿಕೆಯ ನಡುವೆಯೂ ಮನಬಂದಂತೆ ಏರಿಕೆ ಮಾಡಿದ್ದಾರೆ. ಕೆಲವೊಂದು ಸ್ಥಳಗಳಿಗೆ ನಿಗದಿತ ದರಕ್ಕಿಂತ ದುಪ್ಪಟ್ಟು ದರವನ್ನು ಪಡೆಯಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular