ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸೊಹೈಲ್ ಜಮಾದಾರ(21) ಬಂಧಿತ ಆರೋಪಿಯಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಘಟನೆಯಲ್ಲಿ ಗಣೇಶನ ವಿಗ್ರಹ ಸುತ್ತಲೂ ಹಾಕಿದ್ದ ಎರಡು ಗಾಜು ಪುಡಿಯಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಸಾರ್ವಜನಿಕರು ಸ್ಥಳದಲ್ಲಿ ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯ ಮತ್ತು ಕೃತ್ಯಕ್ಕೆ ಬಳಕೆ ಮಾಡಿದ್ದ ಆಟೋ ನಂಬರ್ ಪರಿಶೀಲಿಸಿ ಆರೋಪಿ ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read