HomeKarnatakaಗಣೇಶ ವಿಸರ್ಜನೆ ವೇಳೆ ಗಲಾಟೆ: ಯುವಕನ ಮೇಲೆ ಬ್ಲೇಡ್ ನಿಂದ ಹಲ್ಲೆ; ಕಿವಿ ಕಟ್

ಗಣೇಶ ವಿಸರ್ಜನೆ ವೇಳೆ ಗಲಾಟೆ: ಯುವಕನ ಮೇಲೆ ಬ್ಲೇಡ್ ನಿಂದ ಹಲ್ಲೆ; ಕಿವಿ ಕಟ್

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನ ಗವನಗಳ್ಳಿಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಗೌತಮ್ (23) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವ ವಿಚಾರವಾಗಿ ಎರಡು ತಂಡಗಳ ನದುವೆ ಗಲಾಟೆ ವಿಕೋಪಕ್ಕೆ ಹೋಗಿ, ಬ್ಲೇಡ್ ನಿಂದ ಗೌತಮ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ತಿಮ್ಮರಾಜ್ ಅರಸ್ ಎಂಬಾತ ಹಲ್ಲೆ ನಡೆಸಿದ್ದು, ಗೌತಮ್ ಮುಖ, ಕತ್ತಿಗೆ ಬ್ಲೇಡ್ ನಿಂದ ಹಲ್ಲೆ ನಡೆಸಲಾಗಿದೆ. ಗೌತಮ್ ಕಿವಿಯೇ ಕಟ್ ಆಗಿ ಹೋಗಿದೆ. ಮುಖದಿಂದ ಕತ್ತಿನವರೆಗೂ ಗಂಭೀರ ಗಾಯವಾಗಿದೆ.

ಗೌತಮ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular