SHOCKING: ವಿಸರ್ಜನಾ ಮೆರವಣಿಗೆಯಲ್ಲಿ ‘ಈ ಗಣೇಶ ಬಲಿ ಕೇಳುತ್ತಿದೆ’ ಎಂದು ಘೋಷಣೆ ಕೂಗಿ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಆಡುಗೋಡಿಯ ರಾಮಾಂಜನೇಯ ದೇವಾಲಯ ರಸ್ತೆಯಲ್ಲಿ ಗಣೇಶ ವಿಸರ್ಜನೆ ವೇಳೆ ಓರ್ವನನ್ನು ಹತ್ಯೆ ಮಾಡಲಾಗಿದೆ.

ಲಾಂಗ್, ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಶ್ರೀನಿವಾಸ ಎಂಬುವನನ್ನು ಹತ್ಯೆ ಮಾಡಿದ್ದಾರೆ. ಜಗಳ ಬಿಡಿಸಲು ಬಂದಿದ್ದ ಶ್ರೀನಿವಾಸನ ತಾಯಿಗೂ ಚಾಕುವಿನಿಂದ ಇರಿಯಲಾಗಿದೆ. ಘಟನೆಯಲ್ಲಿ ರಂಜಿತ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಪ್ಟಂಬರ್ ತಿಂಗಳಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಶ್ರೀನಿವಾಸನ ಕಡೆಯವರಿಗೆ ಡ್ಯಾನ್ಸ್ ಮಾಡದಂತೆ ಎಚ್ಚರಿಕೆ ನೀಡಿದ್ದರು. ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ವೇಳೆ ಶ್ರೀನಿವಾಸ ಇದ್ದ ಏರಿಯಾದಲ್ಲಿ ಈ ಗಣೇಶ ಬಲಿ ಕೇಳುತ್ತಿದೆ ಎಂದು ಘೋಷಣೆ ಕೂಗಿ ಡ್ಯಾನ್ಸ್ ಮಾಡಿದ್ದಾರೆ.

ಇದನ್ನು ಪ್ರಶ್ನಿಸಿದ ಶ್ರೀನಿವಾಸ್ ಜೊತೆಗೆ ದುಷ್ಕರ್ಮಿಗಳು ಜಗಳ ತೆಗೆದಿದ್ದಾರೆ. ಜಗಳಕ್ಕೆ ಮೊದಲೇ ಜಗಳಕ್ಕೆ ರೆಡಿಯಾಗಿ ಬಂದಿದ್ದ ದುಷ್ಕರ್ಮಿಗಳು ದಾಳಿ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಶ್ರೀನಿವಾಸನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶ್ರೀನಿವಾಸ ತಾಯಿಗೆ ಚಾಕುವಿನಿಂದ ಇರಿಯಲಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಲಾಟೆ ಸಂದರ್ಭದಲ್ಲಿ ಓರ್ವ ರೌಡಿಶೀಟರ್ ಇದ್ದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಆರೋಪಿಗಳಿಗಾಗಿ ಆಡುಗೋಡಿ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read