HomeLatest NewsBIG NEWS: ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ...

BIG NEWS: ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಗಣೇಶೋತ್ಸವಕ್ಕೆ ಶುಭಕೋರುವ ನಿಟ್ಟಿನಲ್ಲಿ ಅನುಮತಿ ಪಡೆದು ಹಾಕಿದ್ದ ಬ್ಯಾನರ್ ನ್ನು ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದೆ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ.

ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ, ಸೇವಾಂಜಲಿ ನಗರದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ನ್ನು ಅನುಮತಿ ಪಡೆದು ಕುಂಪಣಮಜಲು ಕ್ರಾಸ್ ಬಳಿ ಅಳವಡಿಸಿದ್ದರು.

ಫರಂಗಿಪೇಟೆಯ ಹೈದರ್ ಎಂಬಾತ ಬ್ಯಾನರ್ ಹರಿದು ಹಾಕಿದ್ದ. ೩,೫೦೦ ರೂಪಾಯಿ ನಷ್ಟವುಂಟು ಮಾಡಿದ್ದಲ್ಲದೇ ಧರಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಹೈದರ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular