HomeCrimeಹಾಡಹಗಲೇ ಘೋರ ಕೃತ್ಯ; ಮಚ್ಚಿನಿಂದ ದಾಳಿ ನಡೆಸಿ ವ್ಯಕ್ತಿ ಹತ್ಯೆ

ಹಾಡಹಗಲೇ ಘೋರ ಕೃತ್ಯ; ಮಚ್ಚಿನಿಂದ ದಾಳಿ ನಡೆಸಿ ವ್ಯಕ್ತಿ ಹತ್ಯೆ

ಕೊಯಮತ್ತೂರಿನ ನ್ಯಾಯಾಲಯ ಸಂಕೀರ್ಣದ ಹಿಂದೆ ಮಾರಕಾಸ್ತ್ರಗಳಿಂದ ಐವರ ತಂಡ ಇಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದೆ. ಅಚ್ಚರಿಯೆಂದರೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಂಪೊಂದು ಇಬ್ಬರನ್ನು ಸುತ್ತುವರಿದು ದಾಳಿ ನಡೆಸಿತು. ಹಲ್ಲೆಕೋರರ ಗುಂಪು ಸ್ಥಳದಿಂದ ಕಾಲ್ಕಿತ್ತಿದ್ದು ಹಲ್ಲೆಗೊಳಗಾದವರಲ್ಲಿ ಒಬ್ಬರು ನೆಲಕ್ಕೆ ಕುಸಿದು ಬಿದ್ದಿದ್ದಾರೆ. ನಂತರ ಮತ್ತೊಬ್ಬರ ತಲೆ ಮತ್ತು ಕೈಗೆ ಗಾಯವಾಗಿದ್ದು ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ನಂತರ ಗಾಯಗೊಂಡ ವ್ಯಕ್ತಿ ಮನೋಜ್ (27) ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವ್ಯಕ್ತಿಗಳು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬಂದಿದ್ದರು. ಚಹಾ ಕುಡಿಯಲು ಹೊರಗೆ ಹೋಗಿದ್ದಾಗ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular