ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಸವಣೂರು ಉಪವಿಭಾಗಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಾದ ಅಫ್ತಾಬ್ ಚಂಡನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹಮ್ಮದ್ ಸಾದ್ಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮೀವುಲ್ಲಾ ಲಾಲನಗರ, ಶೋಯಿಬ್ ಮುಲ್ಲಾ, ತೌಸಿಫ್ ಅಹ್ಮದ್ ಚೌಟಿ ಗಡಿಪಾರಿಗೆ ಒಳಗಾದವರು.
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೈಲು ಸೇರಿದ್ದ ಈ ಆರೋಪಿಗಳು ಜಾಮೀನು ಮೇಲೆ ಬಿಡಿಗಡೆಯಾಗಿದ್ದರು. ಜೈಲಿನಿಂದ ಹೊರಬರುತ್ತಿದ್ದಂತೆ ಮೆರವಣಿಗೆ ಮೂಲಕವಾಗಿ ಸಾಗಿದ್ದರು. ಅಲ್ಲದೇ ಪ್ರಕರಣದಲ್ಲಿ ಸಾಕ್ಷಿದಾರರಿಗೆ ಜೀವಬೆದರಿಕೆ ಹಾಕಿದ್ದ ಆರೋಪವೂ ಇದೆ. ಆರೋಪಿಗಳನ್ನು ಗಡಿಪಾರು ಮಾಡುವಂತೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಳೆದ ಜೀನ್ ನಲ್ಲಿ ಸವಣೂರು ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಉಪವಿಭಾಗಾಧಿಕಾರು ಶುಭಂ ಶುಕ್ಲಾ, ಏಳು ಆರೋಪಿಗಳನ್ನು ಒಂದು ವರ್ಷ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

