HomeIndiaಉತ್ತರ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್ , ನೊಂದ ಬಾಲಕಿಯರು ಆತ್ಮಹತ್ಯೆ..!

ಉತ್ತರ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್ , ನೊಂದ ಬಾಲಕಿಯರು ಆತ್ಮಹತ್ಯೆ..!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ 16 ಮತ್ತು 14 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕಾನ್ಪುರದ ಘಟಂಪುರ್ ಪ್ರದೇಶದಲ್ಲಿ ನಡೆದಿದೆ.

ಫೆಬ್ರವರಿ 27 ರಂದು ಕಾನ್ಪುರದ ಘಟಂಪುರ್ ಪ್ರದೇಶದಲ್ಲಿ ಇಬ್ಬರು ಪುರುಷರು ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಅವರ ಆಕ್ಷೇಪಾರ್ಹ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿಯರ ಕುಟುಂಬಗಳು ಹೇಳಿಕೊಂಡಿವೆ.

ಬಾಲಕಿಯರು ಈ ವಿಷಯವನ್ನು ತಮ್ಮ ಸಂಬಂಧಿಕರಿಗೆ ತಿಳಿಸಿದ್ದು, ಅವರು ದೂರು ನೀಡಿದಾಗ ಆರೋಪಿಗಳ ಕುಟುಂಬವು ಅವರನ್ನು ಥಳಿಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ಮನನೊಂದ ಇಬ್ಬರು ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಸಂತ್ರಸ್ತರಲ್ಲಿ ಒಬ್ಬರ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಷಯವನ್ನು ಮುಚ್ಚಿಹಾಕಲು ಆರೋಪಿಗಳ ಕುಟುಂಬವು ಅವರಿಗೆ 5 ಲಕ್ಷ ರೂ.ಗಳ ಆಫರ್ ನೀಡಿತ್ತು ಎಂದು ಸಂತ್ರಸ್ತರಲ್ಲಿ ಒಬ್ಬರ ಅಜ್ಜ ಮಾಧ್ಯಮಗಳಿಗೆ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular